ಭೂಮಿ ಕೊಟ್ಟಿಲ್ಲವೆಂದು ಹಗ್ಗದಲ್ಲಿ ಕಟ್ಟಿ ಶಿಕ್ಷಕಿಗೆ ಥಳಿಸಿದ ಟಿಎಂಸಿ ನಾಯಕ: ದೂರು ದಾಖಲು

TMC
Published on

ದ.ದಿನಾಜ್​ಪುರ: ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್​ಪುರ ಜಿಲ್ಲೆಯ ಪ್ರಾರ್ಥಮಿಕ ಶಾಲಾ ಶಿಕ್ಷಕಿಯೊಬ್ಬರು ಟಿಎಂಸಿ ನಾಯಕ ಸೇರಿದಂತೆ ಒಟ್ಟು ಐವರ ವಿರುದ್ಧ ದೂರು ದಾಖಲಿಸಿದ್ದಾರೆ. ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲೆಯಲ್ಲಿ ರಸ್ತೆ ನಿರ್ಮಾಣಕ್ಕೆಂದು ಗಂಗ್ರಾಂಪುರದ ಶಾಲೆಯ ಶಿಕ್ಷಕಿಯ ಸ್ವಾಧೀನದಲ್ಲಿದ್ದ ಆಸ್ತಿಯನ್ನು ಬಿಟ್ಟುಕೊಡುವಂತೆ ಕೇಳಲಾಗಿತ್ತು. ಆದರೆ ಅದಕ್ಕೆ ಆಕೆ ಒಪ್ಪದಿದ್ದಾಗ, ಬಲವಂತವಾಗಿ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನ ಮಾಡಲಾಗಿದೆ. ಸ್ಥಳೀಯ ಟಿಎಂಸಿ ಮುಖಂಡ ಅಮಲ್​ ಸರ್ಕಾರ್​ ಸೇರಿದಂತೆ ಐದು ಜನರ ಗುಂಪು ತನ್ನನ್ನು ಹಗ್ಗದಲ್ಲಿ ಕಟ್ಟಿಹಾಕಿ ಥಳಿಸಿದ್ದಾರೆ ಎಂದು ಶಿಕ್ಷಕಿ ತಿಳಿಸಿದ್ದಾರೆ.

ಪೊಲೀಸರು ದೂರನ್ನು ಸ್ವೀಕರಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net