

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಪರಾಧಿಯೊಬ್ಬ ಪೆರೋಲ್ ಮೇಲೆ ಹೊರ ಬಂದ ಬಳಿಕ 70 ವರ್ಷದ ವೃದ್ಧೆಯನ್ನು ಕೊಂದಿರುವ ಘಟನೆ ಉತ್ತರಪ್ರದೇಶದ ಹಾರ್ದೋಯ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ರಾಮಶ್ರೀ(70) ಮೃತೆ ಎಂದು ಗುರುತಿಸಲಾಗಿದೆ. ಜೀವಾವಧಿ ಶಿಕ್ಷೆ ಅನುಭವಿಸಿ ಇತ್ತೀಚೆಗೆ ಪೆರೋಲ್ ಮೇಲೆ ಬಿಡುಗಡೆಯಾದ ಪಂಚಮ್ ಎಂಬಾತ ದಾರಿಯಲ್ಲಿ ಹೋಗುತ್ತಿದ್ದ ಆಕೆಯನ್ನು ತಡೆದು ಗುಂಡು ಹಾರಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ನಂತರ, ಕೋಪಗೊಂಡ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಯಾವುದೇ ಭದ್ರತಾ ಲೋಪದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆದರೆ, ಆಸಲಿಗೆ ಕಾರಣ ಏನು? ಎಂಬುದು ಗೊತ್ತಿಲ್ಲವಾದರೂ, ಆಕೆ ಧರಿಸಿದ್ದ ಬಂಗಾರದ ಆಭರಣ ಕಾಣೆಯಾಗಿದ್ದು, ಕಳ್ಳತನಕ್ಕೆ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.(ಏಜೆನ್ಸೀಸ್)