ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

jlpi
Published on

ಹುಬ್ಬಳ್ಳಿ: ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಣ್ಣಿಗೇರಿ ರೈಲು ನಿಲ್ದಾಣದ ಬಳಿ ನಡೆದಿದೆ.

ಹುಬ್ಬಳ್ಳಿಯ ಆನಂದ‌ನಗರದ ವಿಜಯ ನರೇಗಲ್ (29) ಆತ್ಮಹತ್ಯೆ ಮಾಡಿಕೊಂಡ ಕೈದಿ. ಆಗಸ್ಟ್‌ 01 ರಂದು ಇಲ್ಲಿನ ವಿಶ್ವೇಶ್ವರಯ್ಯ ನಗರದ ಉಪ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದನು. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು.

ಆದರೆ ಮಂಗಳವಾರ ರಾತ್ರಿ ರೈಲು ಹಳಿಗೆ ತಲೆ‌ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದ್ದು, ಗದಗ ರೈಲ್ವೆ ಹಾಗೂ ಹುಬ್ಬಳ್ಳಿ ಅಶೋಕನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net