PSI ಪರೀಕ್ಷೆಯಲ್ಲಿ ಅಕ್ರಮ: ಬೆಳ್ಳಂಬೆಳಗ್ಗೆ ಸಿಐಡಿ ಪೊಲೀಸರ ಮುಂದೆ ಜ್ಞಾನ ಜ್ಯೋತಿ ಶಾಲೆ ಮುಖ್ಯಶಿಕ್ಷಕ ಶರಣಾಗತಿ

psi exam scam
Published on

ಕಲಬುರಗಿ: ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದ ಜ್ಞಾನ ಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್ ಸೋಮವಾರ(ಮೇ 2) ಬೆಳ್ಳಂಬೆಳಗ್ಗೆ ಸಿಐಡಿ ಪೊಲೀಸರ ಮುಂದೆ ಶರಣಾಗಿದ್ದು, ಇದರ ಹಿಂದಿದೆ ಒಂದು ರೋಚಕ ಕಥೆ.

ಪಿಎಸ್​ಐ ಹುದ್ದೆ ಹಗರಣ ಬಯಲಾಗುತ್ತಿದ್ದಂತೆ ದಿವ್ಯಾ ಹಾಗರಗಿ ಸೇರಿದಂತೆ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ದಿವ್ಯಾ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅತ್ತ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಜ್ಞಾನ ಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್​, ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಬಂಧಿತ ಆರೋಪಿಗಳೆಲ್ಲಾ ಸೇರಿಕೊಂಡು ಪ್ರಕರಣವನ್ನ ತನ್ನ ತೆಲೆಗೆ ಕಟ್ಟುತ್ತಾರೆ ಅಂತ ಹೆದರಿದ ಕಾಶಿನಾಥ್‌, ಸಿಐಡಿ ಪೊಲೀಸರಿಗೆ ಶರಣಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net