

ಕಲಬುರಗಿ: 'ನನ್ನಿಂದ ಓದೋಕೆ ಆಗುತ್ತಿಲ್ಲ.. ಅಪ್ಪ-ಅಮ್ಮ ದಯವಿಟ್ಟು ನನ್ನನ್ನು ಕ್ಷಮಿಸಿ ಬಿಡಿ' ಎಂದು ಡೆತ್‌ನೋಟ್ ಬರೆದಿಟ್ಟು ಯುವಕನೊಬ್ಬ ಪೊಲೀಸ್ ತರಬೇತಿ ಕೇಂದ್ರದ ವಸತಿ ಗೃಹದಲ್ಲೇ ನೇಣಿಗೆ ಶರಣಾಗಿದ್ದಾನೆ.
ಇಂತಹ ದುರ್ಘಟನೆ ಕಲಬುರಗಿ ಹೊರವಲಯದ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಿಗಟಿ ಗ್ರಾಮದ ಮಂಜುನಾಥ ಮಾರುತಿ(23) ಆತ್ಮಹತ್ಯೆ ಮಾಡಿಕೊಂಡವ.
ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಪೋಷಕರು ಮಗನನ್ನ ಕಲಬುರಗಿಗೆ ಕಳುಹಿಸಿದ್ದರು. ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಅಧಿಕಾರಿಯೊಬ್ಬರ ಮನೆಯಲ್ಲಿ ಇದ್ದುಕೊಂಡು ಮಂಜುನಾಥ ತರಬೇತಿ ಪಡೆಯುತ್ತಿದ್ದ. ಪಿಎಸ್ಐ ಪರೀಕ್ಷೆಯಲ್ಲಿ 2 ಅಂಕ ಕಡಿಮೆ ಬಂದು ಮಂಜುನಾಥ್ ಫೇಲ್ ಆಗಿದ್ದ. ಇದರಿಂದ ನೊಂದ ಮಂಜುನಾಥ್, 'ನನ್ನ ಸಾವಿಗೆ ನಾನೇ ಕಾರಣ. ನನ್ನಿಂದ ಓದೋಕೆ ಆಗುತ್ತಿಲ್ಲ... ಅಪ್ಪ-ಅಮ್ಮ ದಯವಿಟ್ಟು ನನ್ನನ್ನು ಕ್ಷಮಿಸಿ ಬಿಡಿ' ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.