ಕೈ ಕಾರ್ಯಕರ್ತರಿಗೆ ಶೀಘ್ರ ನಿಗಮ, ಮಂಡಳಿ ಭಾಗ್ಯ

750x450_359530-congress
Published on

ಬೆಂಗಳೂರು: ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರಿಗೆ ನಿಗಮ, ಮಂಡಳಿಯಲ್ಲಿನ ನಿರ್ದೇಶಕ, ಸದಸ್ಯ ಸ್ಥಾನ ಕಲ್ಪಿಸುವ ಪ್ರಕ್ರಿಯೆಗೆ ಕಾಂಗ್ರೆಸ್ ಚಾಲನೆ ಕೊಟ್ಟಿದ್ದು, ಆಯ್ಕೆಗೆ ನಿರ್ದಿಷ್ಟ ಚೌಕಟ್ಟು ರೂಪಿಸಿಕೊಂಡಿದೆ.

ಪಕ್ಷದ ಅರಿವಿಗೇ ಬಾರದೇ ಸರ್ಕಾರದ ಹಂತದಲ್ಲಿ ಇತ್ತೀಚೆಗೆ ನಡೆದ ನೇಮಕಗಳ ಬಗ್ಗೆ ಅಸಮಾಧಾನ ಹೊರಹೊಮ್ಮಿತ್ತು. ಇದರ ಬೆನ್ನಲ್ಲೇ ಮಂಗಳವಾರ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಪಕ್ಷದಿಂದ ನಿಯೋಜಿತವಾದ ಗೃಹ ಸಚಿವ ಜಿ.ಪರಮೇಶ್ವ ನೇತೃತ್ವದ ಸಚಿವರಾದ ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿ.ಆರ್.ಸುದರ್ಶನ್, ಎಂ.ಹರೀಶ್ ಕುಮಾರ್, ಶಾಸಕರಾದ ರಿಜ್ವಾನ್, ರೂಪಕಲಾ ಶಶಿಧರ್ ಸಭೆಯಲ್ಲಿ ಉಪಸ್ಥಿತರಿದ್ದು, ಆಯ್ಕೆ ಪ್ರಕ್ರಿಯೆಯ ಮಾನದಂಡದ ಬಗ್ಗೆ ಚರ್ಚೆ ನಡೆಸಿ ಒಂದು ನಿರ್ಣಯಕ್ಕೆ ಬಂದರು.

ಪಕ್ಷದ ಸಂಘಟನೆಗೆ ಶ್ರಮಿಸಿದ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕು ಕಡೆಗಣಿಸಬಾರದು. ಈ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷರಿಂದಲೂ ಹೆಸರುಗಳನ್ನು ಪಡೆಯಬೇಕು. ಯುವ ಕಾಂಗ್ರೆಸ್, ಸಾಮಾಜಿಕ ಜಾಲತಾಣ, ಎನ್‌ಎಸ್‌ಯುಐ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳಲ್ಲಿ ಕಾರ್ಯನಿರ್ವಹಿಸಿದ ಅರ್ಹರನ್ನು ಗುರುತಿಸಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net