ಧಾರಾಕಾರ ಮಳೆಗೆ ಮನೆ ಗೋಡೆ ಕುಸಿತ: ಮಲಗಿದ್ದಲ್ಲೇ ಶವವಾದ ತಾಯಿ-ಮಗಳು

rain
Published on

ಉತ್ತರಕನ್ನಡ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮನೆ ಗೋಡೆ ಕುಸಿದು ಮಲಗಿದ್ದಲ್ಲೇ ತಾಯಿ-ಮಗಳು ಮೃತಪಟ್ಟ ಘಟನೆ ಮಂಗಳವಾರ ಬೆಳಗಿನಜಾವ ಸಂಭವಿಸಿದೆ.

ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ರುಕ್ಮಿಣಿ ವಿಠ್ಠಲ್ ಮಾಚಕ(37) ಮತ್ತು ಇವರ ಪುತ್ರಿ ಶ್ರೀದೇವಿ ವಿಠ್ಠಲ್ ಮಾಚಕ(13) ಮೃತ ದುರ್ದೈವಿಗಳು. ನಿರಂತರ ಮಳೆಗೆ ಇವರು ವಾಸವಿದ್ದ ಮಣ್ಣಿನ ಮನೆಯ ಗೋಡೆ ಕುಸಿದಿದೆ. ಪರಿಣಾಮ ಮಲಗಿದ್ದಲ್ಲೇ ಅಮ್ಮ-ಮಗಳು ಶವವಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಸೀಲ್ದಾರ್​ ಪ್ರಕಾಶ ಗಾಯಕವಾಡ, ತಾಪಂ ಇಒ ಪರಶುರಾಮ್ ಗಸ್ತಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಳೆ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಮತ್ತು ಬುಧವಾರ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ ಹತ್ತು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗಿ ತೀವ್ರ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳ ಖುದ್ದು ವೀಕ್ಷಣೆ ಮಾಡಿ ಜಿಲ್ಲಾಡಳಿತದ ಜತೆಗೆ ಸಿಎಂ ಸಭೆ ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net