ಸೆ.3ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ

rain
Published on

ಬೆಂಗಳೂರು: ರಾಜ್ಯದಲ್ಲಿ ಬಿಡುವು ನೀಡಿರುವ ಮಳೆ ಸೆ.3ರಿಂದ ಚುರುಕಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರದಲ್ಲಿ ಸೆ.3ರಿಂದ ಮುಂದಿನ ಎರಡು ದಿನ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆ.5ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​​ ಘೋಷಿಸಿದೆ.

ಉತ್ತರ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ವಾರದಿಂದ ರಾಜ್ಯದಲ್ಲಿ ಸುರಿಯುತ್ತಿದ್ದ ಮಳೆ ಸದ್ಯ ಬಿಡುವು ನೀಡಿದೆ. ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ. ನಂತರ ಚುರುಕಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net