ಸಿಟಿ ಸ್ಕ್ಯಾನಿಂಗ್​ಗೆ ದರ ನಿಗದಿ ಮಾಡಿದ ಸರ್ಕಾರ, ಖಾಸಗಿ ಆಸ್ಪತ್ರೆಗಳ ವಸೂಲಿ ದಂಧೆಗೆ ಬ್ರೇಕ್

sudhakar
Published on

ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಸಿಟಿ ಸ್ಕ್ಯಾನಿಂಗ್​ ಸೆಂಟರ್​ಗಳಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವವರಿಗೆ ಸರ್ಕಾರ ಬ್ರೇಕ್​ ಹಾಕಿದೆ.

ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಗೊಳಿಸಿ ಮಹತ್ವದ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ರೋಗಿಗಳಿಂದ ಸಿಟಿ ಸ್ಕ್ಯಾನ್​ಗೆ ಹೆಚ್ಚು ಹಣ ವಸೂಲಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇನ್ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್​ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ವ್ಯವಸ್ಥೆಯಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಜನರಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net