

ಶಿವಮೊಗ್ಗ: ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪ್ರಮುಖರು ಸೋಮವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ನಡೆಸಿ ತಯಾರಿಸಿರುವ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕುವ ಅಗತ್ಯವಿಲ್ಲ. 159 ಕೋಟಿ ರೂ. ಖರ್ಚು ಮಾಡಿ ತಯಾರಿಸಿರುವ ವರದಿ ಲಪ್ರದವಾಗಬೇಕು ಎಂದು ಆಗ್ರಹಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯರವರು ಹೇಳಿರುವುದು ಸ್ವಾಗತಾರ್ಹ. ಜಾತಿಗಣತಿ ವರದಿ ಬಹಿರಂಗೊಂಡರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರ ಕಾರ್ಯಕ್ರಮ ರೂಪಿಸಬಹುದು ಎಂದು ಮನವಿಯಲ್ಲಿ ತಿಳಿಸಿದರು.
ರಾಜ್ಯದ 6.5 ಕೋಟಿ ಜನಸಂಖ್ಯೆ ಅಧ್ಯಯನ ಆಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಂಡರೆ ಎಲ್ಲ ಜಾತಿಗಳಿಗೂ ಅನುಕೂಲವಾಗಲಿದೆ. ಹೀಗಾಗಿ ಎಲ್ಲ ಜಾತಿಗಳ ಮುಖಂಡಡು ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು. ಎಚ್.ಕಾಂತರಾಜು ನೇತೃತ್ವದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ಹಾಗೂ ಅಂಕಿ ಅಂಶಗಳನ್ನು ಸಂಗ್ರಹಿಸಿದ ವಿಧಾನವನ್ನು ತಜ್ಞರ ಸಮಿತಿ ಮತ್ತು ಐಐಎಂ ದೃಢೀಕರಿಸಿವೆ. ಸರ್ಕಾರ ವರದಿ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆಯಬೇಕು ಎಂದು ಆಗ್ರಹಿಸಿದರು.
ಅ. 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಿ ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿ ಅ. 16ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಿದರು.
ಒಕ್ಕೂಟದ ಜಿಲ್ಲಾ ಸಂಚಾಲಕರಾದ ಕೆ.ರಂಗನಾಥ್, ಅ್ತಾಬ್ ಫರ್ವಿಜ್, ಎಸ್.ಎಂ.ಶರತ್ ಮರಿಯಪ್ಪ, ಜಿ.ಡಿ.ಮಂಜುನಾಥ್, ಎಂ.ಪ್ರವೀಣ್ ಕುಮಾರ್, ಬಿ.ಲೋಕೇಶ್, ಜಗದೀಶ್, ಗುರುಪ್ರಸಾದ್ ಇತರರಿದ್ದರು.