

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಸಿಎಂ ಅವರನ್ನ ಮಾಡಿತ್ತು. ಈ ವೇಳೆ ಬಸವರಾಜ ಬೊಮ್ಮಾಯಿ, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದರ ಜತೆಗೆ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಆದೇಶಿಸಿದರು. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಉಪಸ್ಥಿತರಿದ್ದರು.