

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆವಿಆರ್ ಠ್ಯಾಗೂರ್ ಅವರು ಕೋವಿಡ್ನಿಂದ ಮೃತಪಟ್ಟಿದ್ದಾರೆ.
ಇತ್ತೀಚಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ವಾರ್ತಾ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಕೆವಿಆರ್ ಠ್ಯಾಗೂರ್, 2006ರಲ್ಲಿ ನಡೆದ ಶ್ರವಣಬೆಳಗೊಳ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಚಾರ ಉಸ್ತುವಾರಿ ನಿಭಾಯಿಸಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಕ್ರಿಯಾಶೀಲ ಅಧಿಕಾರಿ ಆಗಿದ್ದರು ಇವರು.