

ಸರಗೂರು : ವಾಲ್ಮೀಕಿ ಬೇರೆಯಲ್ಲ, ರಾಮಾಯಣ ಬೇರೆಯಲ್ಲ. ರಾಮನ ಕಥೆಯನ್ನು ರಾಮನಿಗೆ ಲವಕುಶರ ಮೂಲಕ ಕೇಳಿಸಿದ ಮಹಾತ್ಮ ವಾಲ್ಮೀಕಿ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ಹೇಳಿದರು.
ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ವಾಲ್ಮೀಕಿ ಅವರನ್ನು ಭಾರತದಲ್ಲಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24,000 ಶ್ಲೋಕಗಳನ್ನು ಒಳಗೊಂಡಿದೆ. ರಾಮಾಯಣದಲ್ಲಿ ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿ ಮಾತೃ, ಪಿತೃ, ಆಚಾರ್ಯ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದರು.
ಎಸ್‌ಟಿ ಮೋರ್ಚಾ ಅಧ್ಯಕ್ಷ ಗೋವಿಂದ ನಾಯಕ, ತಾಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ಕಂದಲಿಕೆ ಗುರುಸ್ವಾಮಿ, ಪ್ರಧಾನ ಕಾರ್ಯದರ್ಶಿಕೃಷ್ಣ , ಮಹೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ಶಿವಕುಮಾರ್, ಮಂಡಲ ಉಪಾಧ್ಯಕ್ಷ ರವಿಕುಮಾರ್ ಸರಗೂರು, ಪಪಂ ಸದಸ್ಯ ನವೀನ್ ಕುಮಾರ್, ಜಿಲ್ಲಾ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಬಸಾಪುರ ಸೋಮನಾಯಕ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಹಂಚಿಪುರ ಗಣಪತಿ, ಜಿಲ್ಲಾ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಅಂಕನಾಯಕ, ಮಂಡಲ ಕಾರ್ಯದರ್ಶಿ ಸಿದ್ದನಾಯಕ, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಲೋಕೇಶ್, ವೀರನಾಯಕ, ಕಾಳಸ್ವಾಮಿ, ಪಕ್ಷದ ಮುಖಂಡರು ಹಾಜರಿದ್ದರು.