ರಶ್​ ಇದ್ದ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು

haveri girl bus
Published on

ಹಾವೇರಿ : ಬಸ್ ತುಂಬಾ ರಶ್ ಇರೋ ಕಾರಣಕ್ಕಾಗಿ ಬಾಗಿಲ ಬಳಿಯೇ ನಿಂತು ಪ್ರಯಾಣಿಸುತ್ತಿದ್ದ ಶಾಲಾ ಬಾಲಕಿ ಬಸ್​​ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಮಧು ಕುಂಬಾರ 14 ವರ್ಷ ಮೃತ ಶಾಲಾ ಬಾಲಕಿ. ಸಾರಿಗೆ ಬಸ್ ನಿಂದ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ.

ವಾಸನ ಗ್ರಾಮದಿಂದ ಕುಸನೂರು ಗ್ರಾಮದ ಪ್ರೌಢಶಾಲೆಗೆ ಆಗಮಿಸುತ್ತಿದ್ದ ವಿದ್ಯಾರ್ಥಿನಿ. ಬಸ್ ತುಂಬಾ ರಶ್​​​ ಇರುವ ಕಾರಣಕ್ಕಾಗಿ ಬಾಗಿಲ ಬಳಿಯೇ ನಿಂತಿದ್ದಳು. ಶಾಲಾ ಬಾಲಕಿ ಆಯ ತಪ್ಪಿ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net