

ಬೆಂಗಳೂರು: ಲಾಜಿಸ್ಟಿಕ್ ಮತ್ತು ಮಾಧ್ಯಮ ಲೋಕದಲ್ಲಿ ಮುಂಚೂಣಿಯಲ್ಲಿರುವ ವಿಆರ್ಎಲ್ ಸಮೂಹ ಸಂಸ್ಥೆ, ಚಿತ್ರ ನಿರ್ಮಾಣ ಕ್ಷೇತ್ರಕ್ಕೂ ಧುಮುಕಿದೆ. ‘ವಿಆರ್ಎಲ್ ಫಿಲಂ ಪ್ರೊಡಕ್ಷನ್ಸ್’ ಎಂಬ ನಿರ್ಮಾಣ ಸಂಸ್ಥೆ ಹುಟ್ಟುಹಾಕಿ, ಅದರಲ್ಲಿ ವಿಜಯಾನಂದ ಶೀರ್ಷಿಕೆಯ ಸಿನಿಮಾ ಘೋಷಣೆ ಮಾಡಿದೆ. ಶೀರ್ಷಿಕೆಯೇ ಹೇಳುವಂತೆ ಚೊಚ್ಚಲ ಚಿತ್ರವಾಗಿ ಸಂಸ್ಥೆಯ ಚೇರ್ಮನ್, ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನ ತೆರೆಮೇಲೆ ಮೂಡಿಬರಲಿದೆ. ಇದೀಗ ಈ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.
ಆಗಸ್ಟ್ 2ರಂದು ವಿಜಯ ಸಂಕೇಶ್ವರ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿಆರ್ಎಲ್ ಸಮೂಹ ಸಂಸ್ಥೆಗಳ ಎಂಡಿ ಆನಂದ ಸಂಕೇಶ್ವರ ಅವರು ವಿಜಯಾನಂದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಸೆಪ್ಟೆಂಬರ್ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು 2022ಕ್ಕೆ ಬಿಡುಗಡೆಯಾಗಲಿದೆ.