

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ)ದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಪ್ರತಿಪಕ್ಷದ ಅಭ್ಯರ್ಥಿಯಾಗಿ ಶರದ್ ಪವಾರ್ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತಾದರೂ ಸ್ವತಃ ಪವಾರ್ ಅವರೇ ಇದನ್ನು ಆಸಕ್ತಿ ತೋರಿಲ್ಲ.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರೂ ಆಗಿರುವ ಪ್ರಭಾವಿ ನೇತಾರ ಪವಾರ್ ಅವರನ್ನು ಪ್ರತಿಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಲು ನಿರ್ಧರಿಸಿದ್ದವು. ಕಾಂಗ್ರೆಸ್ ಕೂಡ ಇದಕ್ಕೆ ತನ್ನ ಬೆಂಬಲ ಘೋಷಿಸಿತ್ತು. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಎ ಈ ಬಗ್ಗೆ ಕಳೆದ ವಾರ ಮುಂಬೈನಲ್ಲಿ ಶರದ್ ಪವಾರ್ರನ್ನು ಭೇಟಿಯಾಗಿ ಚರ್ಚಿಸಿದ್ದರು. ಆದರೆ, ಈ ಅವಕಾಶವನ್ನು ಪವಾರ್ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
ಶರದ್ ಪವಾರ್ ಅವರು ಸದಾ ಸಾಮಾನ್ಯ ಜನರೊಂದಿಗೆ ಇರುವ ವ್ಯಕ್ತಿ. ಅವರು ತಮ್ಮನ್ನು ರಾಷ್ಟ್ರಪತಿ ಭವನಕ್ಕೆ ಸೀಮಿತಗೊಳಿಸಿಕೊಳ್ಳಲು ಇಷ್ಟ ಪಡುತ್ತಿಲ್ಲ. 2024ರ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಕೆಲಸದಲ್ಲಿ ಪವಾರ್ ನಿರತರಾಗಿದ್ದಾರೆ ಎಂದು ವರದಿಯಾಗಿದೆ.