ಹರ್ಷನ ಹತ್ಯೆ ಪ್ರಕರಣ: ಎನ್​ಐಎ ಹೆಗಲಿಗೆ ತನಿಖೆ ಜವಾಬ್ದಾರಿ

shimoga harsha 3
Published on

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಎನ್​ಐಎಗೆ ವಹಿಸಲಾಗಿದೆ.

ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿತ್ತು. ಹೀಗಾಗಿ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ಸರ್ಕಾರ ವಹಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಈಗಾಗಲೇ ಎಫ್​ಐಆರ್ ದಾಖಲಿಸಿಕೊಂಡಿದೆ ಎನ್ನಲಾಗುತ್ತಿದೆ.

ಹರ್ಷನ ಹತ್ಯೆ ಪ್ರಕರಣದ ಹಿಂದೆ ಕೆಲ ಸಂಘಟನೆಗಳು ಇರುವ ಅನುಮಾನ ಇದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಹಲವು ಸಂಘ-ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಕೇಂದ್ರ‌ದ ಗೃಹ ಸಚಿವ ಅಮಿತ್ ಷಾ ಅವರಿಗೂ ಪತ್ರ ಬರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಹರ್ಷನ ಹತ್ಯೆ ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಕೋರಿದ್ದರು. ಶೋಭಾ ಕರಂದ್ಲಾಜೆ ಅವರ ಪತ್ರಕ್ಕೆ ಅಮಿತ್ ಷಾ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಜತೆಗೆ ಹಿಂದು ಮುಖಂಡ ಗಿರೀಶ್ ಭಾರದ್ವಾಜ್ ಎಂಬುವರು ಕೂಡ ಎನ್​ಐಎ ಡೈರೆಕ್ಟರ್ ಜನರಲ್​ಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು ಎನ್​ಐಎ ನಿಂದಲೇ ನಡೆಸುವಂತೆ ಕೋರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net