ಕ್ಷೇತ್ರ ಹುಡುಕುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಇಂತಹ ಪರಿಸ್ಥಿತಿ ಬರಬಾರದಿತ್ತು...

siddaramaiah vishwanath
Published on

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಅವರಿಗೆ ಸ್ವಂತ ಕ್ಷೇತ್ರವಿಲ್ಲ. ಮಾಜಿ ಮುಖ್ಯಮಂತ್ರಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾಲೆಳೆದಿದ್ದಾರೆ.

ಸುದ್ದಿಗಾರರ ಜತೆಗೆ ಶುಕ್ರವಾರ ಮಾತನಾಡಿದ ವಿಶ್ವನಾಥ್​, ಸಿದ್ದರಾಮಯ್ಯ ಶಿಷ್ಯಂದಿರು ಎಲ್ಲವನ್ನು ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಹೇಳಿದರೆ ಕಾಂಗ್ರೆಸ್​ಗೆ 150 ಸೀಟು ಬರುತ್ತವೆ ಅಂತಾನೂ ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಸಿಎಂ ಆದಾಗಲೇ 70 ಸ್ಥಾನಗಳಿಗೆ ನಿಂತಿದ್ದೇಕೆ? ಎಂಬುದನ್ನು ಹೇಳಬೇಕು ಎಂದು ಮಾತಿನಲ್ಲೇ ತಿವಿದರು.

ಸಿದ್ದರಾಮಯ್ಯ ಅವರೇ ಸಿಎಂ ಎನ್ನೋದಕ್ಕೆ ಟೂ ಅರ್ಲಿ ಇದು. ಮುಖ್ಯಮಂತ್ರಿ ಸ್ಥಾನ ಪತ್ರಾವಳಿ ಅಲ್ಲ, ಉಂಡು ಬಿಸಾಡೋದಲ್ಲ. ಅದನ್ನು ಸ್ವಚ್ಛವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಹೋದ ಸಿದ್ದರಾಮಯ್ಯ ಅವರಿಗೆ ಒಂದು ಬಾರಿ ಅವಕಾಶ ಕೊಟ್ಟಾಗಿದೆ. ಅದೇ ಪಕ್ಷದಲ್ಲಿ ಇರುವ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಪರಮೇಶ್ವರ್ ಇದ್ದಾರೆ. ಅನಗತ್ಯ ಗೊಂದಲ ಸೃಷ್ಟಿಸಿ ಜಮೀರ್ ಅವರನ್ನು ಮುಂದಿಟ್ಟುಕೊಂಡು ಹೋಗಬೇಡಿ ಸಿದ್ದರಾಮಯ್ಯ ನವರೇ, ಒಳ್ಳೆಯದಾಗಲ್ಲ ಎಂದು ಎಚ್.ವಿಶ್ವನಾಥ್ ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net