ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ

22 yelandur 02
ಯಳಂದೂರು ಸಮೀಪದ ಸಂತೆಮರಹಳ್ಳಿಯ ಬಳಿ ಸಂಸದ ಸುನೀಲ್ ಬೋಸ್‌ರನ್ನು ಡಿ.ಎನ್. ನಟರಾಜು ಬಳಗದ ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಯಿತು. ಡಿ.ಎನ್. ನಟರಾಜು, ವೈ.ಕೆ.ಮೋಳೆ ನಾಗರಾಜು, ಮುಡಿಗುಂಡ ಶಾಂತರಾಜು ಸೇರಿದಂತೆ ಅನೇಕರು ಇದ್ದರು.
Published on

ಸಂಸದ ಸುನೀಲ್ ಬೋಸ್ ಭರವಸೆ

ಯಳಂದೂರು :ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಮಾಡುತ್ತಿದ್ದು, ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಸಂಸದ ಸುನೀಲ್‌ಬೋಸ್ ಮಾಹಿತಿ ಹೇಳಿದರು.

ಪಟ್ಟಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಜನರು ನನ್ನ ಮೇಲೆ ಭರವಸೆ ಇಟ್ಟು ಗೆಲ್ಲಿಸಿದ್ದಾರೆ. ಇದನ್ನು ಹುಸಿಗೊಳಿಸದೆ ಕೆಲಸ ಮಾಡುತ್ತೇನೆ. ಮೈಸೂರಿನಲ್ಲಿ ಸಂಸದರ ಕಚೇರಿ ತೆರೆದಿದ್ದು ಈಗ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲೂ ಕಚೇರಿಯನ್ನು ತೆರೆಯಲಾಗಿದೆ. ಸಾರ್ವಜನಿಕರು ಇಲ್ಲಿ ಸಂಪರ್ಕಿಸಲು ತಮ್ಮ ಆಹವಾಲುಗಳನ್ನು ಸಲ್ಲಿಸಲು ಅನುಕೂಲ ಮಾಡಲಾಗಿದೆ. ಕ್ಷೇತ್ರದಲ್ಲಿನ ಮೂಲ ಸಮಸ್ಯೆಗಳ ನಿವಾರಣೆ ಹಾಗೂ ಶೈಕ್ಷಣಿವಾಗಿ ಇದನ್ನು ಮುಂದುವರೆಯಲು ಬೇಕಾದ ಎಲ್ಲ ಸವಲತ್ತುಗಳನ್ನು ತರಲು ಪ್ರಾಮಾಣಿಕವಾಗಿ ಯತ್ನಿಸುತ್ತೇನೆ. ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಕ್ಷೇತ್ರವನ್ನು ಮಾದರಿಯಾಗಿಸುವ ಯತ್ನ ನಡೆಸುತ್ತೇನೆ ಎಂದರು.

ಕಾಂಗ್ರೆಸ್ ಮುಖಂಡ ಡಿ.ಎನ್. ನಟರಾಜು, ಕೊಳ್ಳೇಗಾಲ ನಗರಸಭಾ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು, ತಾಪಂ ಮಾಜಿ ಸದಸ್ಯ ವೈ.ಕೆ.ಮೋಳೆ ನಾಗರಾಜು, ಪ್ರಭುಶಂಕರ, ವೆಂಕಟೇಶ್, ಶಿವನಂಜಶೆಟ್ಟಿ, ತಮ್ಮಣ್ಣ, ರಾಜಶೇಖರ್ ಸಂಸದರ ಆಪ್ತ ಕಾರ್ಯದರ್ಶಿ ಲಕ್ಷ್ಮಿನಾರಾಯಣ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net