ಸಿಂದಗಿಯಲ್ಲಿ ಉಪಸಮರ: ಮೂರು ಪಕ್ಷದಲ್ಲೂ ಗರಿಗೆದರಿದ ರಾಜಕೀಯ ಚಟುವಟಿಕೆ

BJP Congress JDS For Web 6x4
Published on

ವಿಜಯಪುರ: ಎಂಸಿ ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ವಿಧಾನಸಾಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಟಿಕಟ್​ಗಾಗಿ ಮೂರು ಪಕ್ಷದಲ್ಲೂ ಪೈಪೋಟಿ ಶುರುವಾಗಿದೆ.

ಪ್ರಮುಖವಾಗಿ ಬಿಜೆಪಿಯಿಂದ ಮಾಜಿ ಶಾಸಕ ರಮೇಶ ಭೂಸನೂರ, ಕಾಂಗ್ರೆಸ್​ನಿಂದ ಅಶೋಕ ಮನಗೂಳಿ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕ ರವಿಕಾಂತ ಪಾಟೀಲ್ ಅವರ ಹೆಸರುಗಳು ಕೇಳಿ ಬಂದಿವೆ. ಜೆಡಿಎಸ್​ನಿಂದ ಚುನಾಯಿತರಾಗಿದ್ದ ಎಂಸಿ ಮನಗೂಳಿ ಅವರು 2021ರ ಜನವರಿ 28ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಅವರ ಹಿರಿಯ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಮೂರು ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆ ಗರಿಗೆದರಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್​ನಲ್ಲಿ ಟಿಕೆಟ್​ ಆಕಾಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇನ್ನು ಪಕ್ಷಗಳ ವರಿಷ್ಠರು ಅಂತಿಮವಾಗಿ ಯಾರಿಗೆ ಅಭ್ಯರ್ಥಿಯನ್ನಾಗಿ ಗುರುತಿಸುತ್ತಾರೋ ನೋಡಬೇಕಿದೆ. ಅಕ್ಟೋಬರ್ 30ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net