ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ: ಸಿರಿಗೆರೆ ತರಳಬಾಳು ಮಠದಿಂದ ಅರ್ಜಿ ಆಹ್ವಾನ

sirigere tarabalu math
Published on

ಚಿತ್ರದುರ್ಗ: ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಿರಿಗೆರೆ ಸಂಸ್ಥೆಯಲ್ಲಿ ಪಿಯುಸಿ ವಿಜ್ಞಾನ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಮೇ 25ರೊಳಗೆ ಅರ್ಜಿ ಸಲ್ಲಿಸಬೇಕು. 26ರಂದು ಎಂ.ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 11ಕ್ಕೆ ಪರೀಕ್ಷೆಡ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ಕಾಲೇಜು ಶುಲ್ಕ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಎಂ.ಬಸವಯ್ಯ ವಸತಿ ಪದವಿ ಪೂರ್ವ ಕಾಲೇಜು, ಸಿರಿಗೆರೆ-577541. ಮೊಬೈಲ್​ ಸಂಖ್ಯೆ: 78928 93772, 96639 56275 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net