ಶ್ರೀಲಂಕಾದಲ್ಲಿ ಮತ್ತೆ ತುರ್ತುಪರಿಸ್ಥಿತಿ ಘೋಷಣೆ: ಆರ್ಥಿಕ ಬಿಕ್ಕಟ್ಟಿಗೆ ನಲುಗಿದ ಜನ, ಅಧ್ಯಕ್ಷರ ರಾಜೀನಾಮೆಗೆ ಪಟ್ಟು

Sri Lanka
Published on

ಕೊಲಂಬೊ: ಶ್ರೀಲಂಕಾದಲ್ಲಿ ಮತ್ತೆ ಆರ್ಥಿಕ ತುರ್ತುಪರಿಸ್ಥಿತಿ ಘೋಷಣೆಯಾಗಿದೆ. ಐದು ವಾರದಲ್ಲಿ ಎರಡನೇ ಬಾರಿಗೆ ಕಠಿಣ ಕಾನೂನು ಜಾರಿಗೊಳಿಸಲಾಗಿದೆ. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿದ್ದು, ಅಗತ್ಯ ವಸ್ತುಗಳ ಕೊರತೆ ಹಾಗೂ ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆ ಅಧ್ಯಕ್ಷ ಗೊಟಬಯ ರಾಜಪಕ್ಷರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಒಂದೂವರೆ ತಿಂಗಳಿಂದ ಪ್ರತಿಭಟನೆಗಳು ತೀವ್ರಗೊಂಡಿದೆ. ಶುಕ್ರವಾರ ಅಂಗಡಿಗಳು ಮತ್ತು ಸಾರಿಗೆ ವ್ಯವಸ್ಥೆಯನ್ನ ಬಂದ್​ ಮಾಡಿ ಹೋರಾಟ ನಡೆಸಿದರು. ಅಷ್ಟೇ ಅಲ್ಲ ಸಂಸತ್ತಿಗೆ ನುಗ್ಗಲು ಯತ್ನಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಅಶ್ರವಾಯು-ಜಲಫಿರಂಗಿ ಬಳಲಾಯಿತು. ತೀವ್ರ ಸ್ವರೂಪದ ಹೋರಾಟ ನಿಯಂತ್ರಿಸಲು ಕಠಿಣ ನಿಯಮ ಕೈಗೊಂಡಿರುವ ಅಧ್ಯಕ್ಷರು ಶುಕ್ರವಾರ ರಾತ್ರಿ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ಏ.1ರಂದು ಘೋಷಿಸಿದ್ದ ಆರ್ಥಿಕ ತುರ್ತುಪರಿಸ್ಥಿತಿಯನ್ನು ಏ.14ರಂದು ಹಿಂಪಡೆಯಲಾಗಿತ್ತು. ಇದೀಗ ಮತ್ತೊಮ್ಮೆ ತುರ್ತುಪರಿಸ್ಥಿತಿ ಜಾರಿಯಾಗಿದೆ. ಶ್ರೀಲಂಕಾದಲ್ಲಿ ಜೀವನಾವಶ್ಯಕ ಸಾಮಗ್ರಿ ಬೆಲೆ ಅಕ್ಷರಶಃ ಗಗನಕ್ಕೇರುತ್ತಿವೆ. ಒಂದು ಕೆಜಿ ಅಕ್ಕಿಯ ಬೆಲೆ 200 ರೂಪಾಯಿ ದಾಟಿದೆ. ಒಂದು ಕೆಜಿ ಹಾಲಿನ ಪುಡಿ ದರ 2000 ರೂ. ದಾಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net