ಸಹೋದರ ಸತ್ತ ಮರುದಿನವೇ ಕಾಂಗ್ರೆಸ್​ ಮುಖಂಡೆಯೂ ಕರೊನಾಗೆ ಬಲಿ!

corona death case
Published on

ವಿಜಯನಗರ: ನಿನ್ನೆ ತಮ್ಮ, ಇಂದು ಅಕ್ಕ ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಪೇಟೆಯಲ್ಲಿ ಸಂಭವಿಸಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಕ್ಯಾರೋಲಿನ್ ಲೂಸಿಯಾ ಸ್ಮಿತ್(45) ಮತ್ತು ಇವರ ತಮ್ಮ ಸಾವಿಯೋ ಸ್ಮಿತ್(42) ಇಬ್ಬರೂ ಒಂದು ದಿನದ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಕ್ಯಾರೋಲಿನ್ ಲೂಸಿಯಾ ಸ್ಮಿತ್ ಅವರು ಹೊಸಪೇಟೆಯ ಜನನಿ ಮಹಿಳಾ ಸಬಲೀಕರಣ ಸಂಘಟನೆಯಲ್ಲೂ ಸೇವೆ ಸಲ್ಲಿಸುತ್ತಿದ್ದರು. ಹೊಸಪೇಟೆ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕೋವಿಡ್ ಸಮೀಕ್ಷೆ ಕಾರ್ಯದಲ್ಲಿ ಸ್ವಯಂ ಸೇವಕಿಯಾಗಿದ್ದರು. ಇದನ್ನೂ ಓದಿರಿ ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಕ್ಯಾರೋಲಿನ್ ಲೂಸಿಯಾ ಸ್ಮಿತ್ ಮತ್ತು ಸಾವಿಯೋ ಸ್ಮಿತ್ ಇಬ್ಬರಿಗೂ ಕಳೆದ ವಾರ ಕರೊನಾ ಸೋಂಕು ತಗುಲಿತ್ತು. 8 ದಿನಗಳಿಂದ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಶುಕ್ರವಾರ ತಮ್ಮ ಮೃತಪಟ್ಟರು. ಇಂದು ಅಕ್ಕ ಕೊನೆಯುಸಿರೆಳೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net