ಅಫ್ಘಾನಿಸ್ತಾನದಲ್ಲಿ ಭೂಕಂಪ: 255 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

Earthquake Hits Afghanistan
Published on

ಇಸ್ಲಾಮಾಬಾದ್​: ಅಫ್ಘಾನಿಸ್ತಾನದಲ್ಲಿ ಬುಧವಾರ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸುಮಾರು 255 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನದ ಆಗ್ನೇಯ ಭಾಗದ ಖೋಸ್ಟ್ ನಗರದಿಂದ ಸುಮಾರು 44 ಕಿಮೀ ವ್ಯಾಪ್ತಿ ಪ್ರದೇಶದವರೆಗೂ ಭೂಕಂಪ ಆಗಿದ್ದು, ನೂರಾರು ಜನರು ಅವಶೇಶಗಳ ಅಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಅವಘಡದಲ್ಲಿ ಸುಮಾರು 255 ಮಂದಿ ಮೃತಪಟ್ಟಿದ್ದಾರೆ. 55ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಿಕ್ಟರ್​ ಮಾಪನದಲ್ಲಿ ಭೂಕಂಪದ ತೀವ್ರತೆ 6.1 ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net