

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕ ನಿವಾಸಿ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ(17) ಶುಕ್ರವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಬಳಿಕ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತೀವ್ರ ಅಸ್ವಸ್ಥರಾಗಿದ್ದರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿ ವ್ಯಾಸಂಗಕ್ಕೆ ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು. ವಿದ್ಯಾಭಾರತಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.