

ಬೆಂಗಳೂರು: ಬೈಕ್‌ನಲ್ಲಿ ಅತೀವೇಗವಾಗಿ ಬಂದ ವಿದ್ಯಾರ್ಥಿಯೊಬ್ಬ ಆಯಾತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೇರಳ ಮೂಲದ ಸಂತೋಷ್(೧೯) ಮೃತ ವಿದ್ಯಾರ್ಥಿ. ಸಂತೋಷ್, ಕುಂಬಳಗೋಡುವಿನಲ್ಲಿರುವ ಕಾಲೇಜಿನಲ್ಲಿ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ. ಬುಧವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಯಶವಂತಪುರದಲ್ಲಿರುವ ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರುತ್ತಿದ್ದ. ಆಗ ಮೈಸೂರು ರಸ್ತೆ ಕಡೆಯಿಂದ ಮಾಗಡಿ ರಸ್ತೆ ಕಡೆ ವೇಗವಾಗಿ ಹೋಗುತ್ತಿದ್ದು, ರಸ್ತೆಯ ಎಡಭಾಗಕ್ಕೆ ತಿರುವು ಪಡೆದುಕೊಂಡಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಪರಿಣಾಮ ತಲೆ ಹಾಗೂ ಮುಖಕ್ಕೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.