ಮಾರುಕಟ್ಟೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ: ಸುಟ್ಟು ಭಸ್ಮವಾದ 30 ಮಳಿಗೆಗಳು!Fire

Fire
Published on

Fire: ದೆಹಲಿಯ ಪ್ರಸಿದ್ಧ ಬಯಲು ಮಾರುಕಟ್ಟೆಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಅವಘಡದಲ್ಲಿ 30 ಮಳಿಗೆಗಳು ಸುಟ್ಟು ನಾಶವಾಗಿರುವ ಘಟನೆ ಬುಧವಾರ(ಏ.30) ರಾತ್ರಿ ನಡೆದಿದೆ.

ಒಂದು ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಬೇಗನೆ ಹರಡಿ ವಿವಿಧ ರಾಜ್ಯಗಳ ಸುಮಾರು 30 ಮಳಿಗೆಗಳು ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಹದಿನಾಲ್ಕು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗುತ್ತು ಆದರೆ ಈ ದುರಂತದಲ್ಲಿ ಯಾವುದೇ ಸಾವುನೋವುಗಳು, ಯಾರಿಗೂ ಗಾಯಗಳು ಆಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವಘಡ ಸಂಭವಿಸಿದ ಪ್ರದೇಶದ ಜನರನ್ನು ತಕ್ಷಣವೇ ಸ್ಥಳಾಂತರಿಸದ ಎರಡು ಗಂಟೆಗಳ ನಂತರ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿಯನ್ನು ನಿಯಂತ್ರಣಕ್ಕೆ ತಂದ ಕೂಡಲೇ ಸ್ಥಳಕ್ಕೆ ತಲುಪಿದ ದೆಹಲಿ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ, ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಮಾಹಿತಿ ನೀಡಿದರು.

ಅಂಗಡಿ ಮಾಲೀಕರಿಗೆ ಭಾರಿ ನಷ್ಟ

ಅಂಗಡಿ ಮಾಲೀಕರಲ್ಲಿ ಒಬ್ಬರು ಕನಿಷ್ಠ 10 ರೂ ಕೋಟಿ ಮೌಲ್ಯದ ಸರಕುಗಳು ನಾಶವಾಗಿವೆ ಎಂದು ಹೇಳಿಕೊಂಡಿದ್ದಾರೆ, ಮತ್ತೊಬ್ಬ ಅಂಗಡಿ ಮಾಲೀಕ ತಮಗೆ ಕನಿಷ್ಠ 1.ರೂ ಕೋಟಿ ನಷ್ಟವಾಗಿದೆ ಎಂದು ಹೇಳಿದ್ದಾರೆ.

"ಬೆಂಕಿ ಹೇಗೆ ಹೊತ್ತಿಕೊಂಡಿತು ಎಂದು ನಮಗೆ ತಿಳಿದಿಲ್ಲ, ಆದರೆ ನಾವು ಏನನ್ನೂ ಉಳಿಸಲು ಸಾಧ್ಯವಾಗಲಿಲ್ಲ"ಎಂದು ನೋವಿನಲ್ಲಿ ಮಾಲೀಕರೊಬ್ಬರು ಹೇಳಿಕೊಂಡಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಕೆಲವು ಅಂಗಡಿಯವರು, ಮಾರುಕಟ್ಟೆಯಲ್ಲಿ ಸರಿಯಾದ ಅಗ್ನಿ ಸುರಕ್ಷತಾ ವ್ಯವಸ್ಥೆಗಳಿಲ್ಲ , ಅಗ್ನಿಶಾಮಕ ದಳ ತಲುಪಲು ಸುಮಾರು ಒಂದೂವರೆ ಗಂಟೆ ಬೇಕಾಗಿದೆ ಎಂದು ಆರೋಪಿಸಿದ್ದಾರೆ.

ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net