

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಂಪುಟ ರಚನೆ ಆಗುತ್ತಿದ್ದಂತೆ ಸುರೇಶ್ ಕುಮಾರ್ ಭಾವುಕ ವಿದಾಯ ಹೇಳಿದ್ದಾರೆ.
ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದ ಸುರೇಶ್ ಕುಮಾರ್ಗೆ ಈ ಭಾರಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಮಾತನಾಡಿದ ಸುರೇಶ್ ಕುಮಾರ್ 'ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು' ಎಂದಿದ್ದಾರೆ.
ಸುರೇಶ್ ಕುಮಾರ್ ಜತೆಗೆ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಯೋಗೇಶ್ವರ್, ಆರ್.ಶಂಕರ್, ಶ್ರೀಮಂತ ಪಾಟೀಲ್ ಅವರನ್ನೂ ಸಂಪುಟ ಕೈಬಿಡಲಾಗಿದೆ.