ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡಿನ ಚಿನ್ನಮ್ಮ!

shashkikala natarajan visit chamundi hill
Published on

ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆಪ್ತೆ ಶಶಿಕಲಾ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶನಿವಾರ ಬೆಳಗ್ಗೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ದೇಗುಲ ಹಾಗೂ ಶ್ರೀರಂಗಪಟ್ಟಣದಲ್ಲಿ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದ ಶಶಿಕಲಾ, ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು.

ಸದ್ಯ ರಾಜಕೀಯದಿಂದ ದೂರ ಇರುವ ಚಿನ್ನಮ್ಮ, ಜಯಲಲಿತಾ ಅವರಂತೆಯೇ ನಾಡದೇವಿಗೆ ಪೂಜೆ ಸಲ್ಲಿಸಿದರು. ಶಶಿಕಲಾ ಅವರನ್ನ ನೋಡಿ ಕೆಲವರು ಚಿನ್ನಮ್ಮ.. ಚಿನ್ನಮ್ಮ‌.. ಎಂದು ಕೂಗಿ ಫೋಟೋ ತೆಗೆಸಿಕೊಂಡ‌ರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net