

ಬೆಂಗಳೂರು: ದೊಡ್ಡ ನೆಕ್ಕುಂದಿಯ ರೈಲು ಸೇತುವೆ ಬಳಿ ಶುಕ್ರವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಸ್‌ಟಾವೇರ್ ಇಂಜಿನಿಯರ್ ಮೃತಪಟ್ಟಿದ್ದಾರೆ.
ಕೇರಳ ಮೂಲದ ರೋಹನ್ (೨೨) ಮೃತರು.
ಮಹದೇವಪುರದಲ್ಲಿ ವಾಸವಗಿದ್ದ ರೋಹನ್, ಮಾರತ್‌ಹಳ್ಳಿಯ ಸ್‌ಟಾವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಅವರು ಗುರುವಾರ ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಅಜಾಗರೂಕತೆಯಿಂದ ಅತಿ ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದ ರೋಹನ್, ದೊಡ್ಡ ನೆಕ್ಕುಂದಿಯ ರೈಲು ಸೇತುವೆ ಬಳಿ ನಿಯಂತ್ರಣ ತಪ್ಪಿ ಕಬ್ಬಿಣದ ಬ್ಯಾರಿಕೇಡ್‌ಗೆ ವಾಹನ ಗುದ್ದಿಸಿದ್ದಾರೆ. ಆಗ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ಸಂದರ್ಭದಲ್ಲಿ ರೋಹನ್, ಹೆಲ್ಮೆಟ್ ಧರಿಸಿದ್ದರು. ಆದರೆ, ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಹೆಲ್ಮೆಟ್ ನಜ್ಜುಗುಜ್ಜಾಗಿ ತಲೆಗೆ ತೀವ್ರ ಪೆಟ್ಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಚ್‌ಎಎಲ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.