

ಬೆಂಗಳೂರು: ಮೇಕೆದಾಟು ಯೋಜನೆಗೆ ರಾಜ್ಯ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕಾಂಗ್ರೆಸ್ ನಡೆಸಿದ ಮೇಕೆದಾಟು ಯೋಜನೆ ಜಾರಿಯನ್ನು ಪ್ರತಿಷ್ಠಯನ್ನಾಗಿ ಸ್ವೀಕರಿಸಿದ್ದ ರಾಜ್ಯ ಕಾಂಗ್ರೆಸ್, ಡಿಕೆಶಿ ನೇತೃತ್ವದಲ್ಲಿ ಹಲವು ಅಡೆ ತಡೆಗಳ ನಡುವೆಯೂ ಪಾದಯಾತ್ರೆ ಮಾಡಿದೆ. ಇದೀಗ ರಾಜ್ಯ ಸರ್ಕಾರವೂ ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಇದರ ಜತೆಗೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೋಟ್ಯಂತರ ಅನುದಾನ ಹಂಚಿಕೆ ಮಾಡಲಾಗಿದೆ.