ಮದುವೆ ನಿಶ್ಚಿತಾರ್ಥಕ್ಕೆ ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

accident
Published on

ಕೊಪ್ಪಳ: ಕನಕಗಿರಿ ತಾಲೂಕು ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಕಾರಟಗಿ ಪಟ್ಟಣದ ಇಂದಿರಾನಗರದ ಯಮನೂರಪ್ಪ ಸಿಂಧನೂರು(55) ಮತ್ತು ತಿಪ್ಪಮ್ಮ (45) ಮೃತ ದುರ್ದೈವಿಗಳು. ಕಾರಟಗಿಯ ಯುವಕನಿಗೆ ಮದುವೆ ನಿಶ್ಚಯ ಮಾಡಲೆಂದು ಕಾರಟಗಿಯಿಂದ ಕನಕಗಿರಿಯ ಶಿರವಾರ ಗ್ರಾಮಕ್ಕೆ ಟ್ರ್ಯಾಕ್ಟರ್​ನಲ್ಲಿ 15ಕ್ಕೂ ಹೆಚ್ಚು ಮಂದಿ ತೆರಳುತ್ತಿದ್ದರು.

ಮಾರ್ಗಮಧ್ಯೆ ನವಲಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ​ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net