ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಎನ್ನುತ್ತಲೇ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಉಮೇಶ್​ ಕತ್ತಿ

umesh katti
Published on

ಚಾಮರಾಜನಗರ: ಬಂಡೀಪುರ ಕಾಡಿನಲ್ಲಿ ಸಫಾರಿ ಮೂಡಿನಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಅಲ್ಲೂ ತಮ್ಮ ಮನದ ಇಂಗಿತ ಹೊರಹಾಕಿದ್ದಾರೆ. ನಾನು ಪರ್ಮನೆಂಟ್ ಸಿಎಂ ಆಕಾಂಕ್ಷಿ ಎಂದ ಸಚಿವರು, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಎಂದಿದ್ದಾರೆ.

ಬಂಡೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್​ ಕತ್ತಿ, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ. ಆದರೆ, ರಾಜಕೀಯ ಕಾರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೆ, ನನಗೆ ಈಗ 60 ವರ್ಷ ವಯಸ್ಸು. ಇನ್ನೂ 15 ವರ್ಷವಿದ್ದು, ನಾನು ಪರ್ಮನೆಂಟ್ ಸಿಎಂ ಆಕಾಂಕ್ಷಿ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net