ಪರೀಕ್ಷಾ ಕೊಠಡಿಯಲ್ಲಿ ಗಲಾಟೆ: ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ!

exam new
Published on

ಶಿವಮೊಗ್ಗ: ಪರೀಕ್ಷಾ ಕೊಠಡಿಯಲ್ಲಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯ ಕೈ ಕಚ್ಚಿದ ಘಟನೆ ಹೊಸನಗರ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭವಿಸಿದೆ.

ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿದ್ದಾಗ ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿದ್ದ ಉಪನ್ಯಾಸಕರು ಪ್ರಶ್ನೆ ಮಾಡಿದ್ದು, ನಕಲು ಮಾಡಲು ಬಳಕೆ ಮಾಡುತ್ತಿದ್ದ ಮೊಬೈಲ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿದೆ. ಸಿಟ್ಟಿಗೆದ್ದ ಉಪನ್ಯಾಸಕರು ವಿದ್ಯಾರ್ಥಿಯ ಕೈ ಕಚ್ಚಿದ್ದಾರೆ.

ಈ ಬಗ್ಗೆ ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಉಪನ್ಯಾಸಕರೂ ಕೂಡ ಪರೀಕ್ಷಾ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ವಿದ್ಯಾರ್ಥಿ ವಿರುದ್ಧ ದೂರು ಕೊಟ್ಟಿದ್ದರು. ಪ್ರಕರಣ ಎಲ್ಲಿಂದ ಎಲ್ಲಿಗೋ ಹೋಗುವುದನ್ನು ಹಾಗೂ ವಿದ್ಯಾರ್ಥಿಯ ಭವಿಷ್ಯ ಹಾಳಾಗಬಾರದು ಎನ್ನುವ ಕಾರಣಕ್ಕೆ ಸಂಧಾನ ಮಾಡಿ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net