

ಗದಗ: ವೆಂಟಿಲೇಟರ್ ಸಿಗದೆ ಕರೊನಾ ಸೋಂಕಿತ ಸಾವಿನ ಸರಣಿ ಮುಂದುವರಿದಿದೆ. ಇಂದು(ಸೋಮವಾರ) ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಸಿಗದೆ ಮೂವರು ಸತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಮುಂಡರಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕರೊನಾ ಸೋಂಕಿತರ ಪೈಕಿ ನಾಲ್ವರಿಗೆ ವೆಂಟಿಲೇಟರ್ ಬೆಡ್ಗಳ ಅವಶ್ಯಕತೆ ಇದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದರು.
ಆದರೆ, ಗದಗ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಇರುವ ವೆಂಟಿಲೇಟರ್ ಬೆಡ್ಗಳು ಭರ್ತಿಯಾಗಿದ್ದರಿಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ. ಮೃತರ ಪೈಕಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಇದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ