ಉಪಸಮರ ಬಹಿರಂಗ ಪ್ರಚಾರಕ್ಕೆ ತೆರೆ: ಮನೆ-ಮನೆಗೆ ತೆರಳಿ ಮತಯಾಚನೆ

con-jds-bjp
Published on

ಬೆಂಗಳೂರು: ರಾಜ್ಯದ ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗುತ್ತಿರುವ ಹಾನಗಲ್​ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರದ ಕೊನೇ ದಿನವಾದ ಬುಧವಾರ ಎರಡೂ ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದರು. ಮೂರೂ ಪಕ್ಷಗಳ ನಾಯಕರು ಕರೊನಾ ಮೂರನೇ ಅಲೆ ಆತಂಕವನ್ನು ಮರೆಮಾಚಿ ಭರ್ಜರಿ ರೋಡ್​ ಶೋ ನಡೆಸಿ ಮತಯಾಚಿಸಿದರು.

ಎರಡೂ ಕ್ಷೇತ್ರಗಳಿಗೆ ಅ.30ರಂದು ಮತದಾನ ನಡೆಯಲಿದೆ. ಮಾದರಿ ನೀತಿ ಸಂಹಿತೆ ಪ್ರಕಾರ ಮತದಾನಕ್ಕೆ 72 ತಾಸುಗಳ ಮುಂಚೆ ಬಹಿರಂಗ ಪ್ರಚಾರ ಕೊನೆಗೊಂಡಿದೆ. ಹೀಗಾಗಿ ಕಳೆದ 15 ದಿನಗಳಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ಹೊರಗಿನವರು ಬುಧವಾರ ಸಂಜೆ ವೇಳೆಗೆ ಗಂಟೆ-ಮೂಟೆ ಕಟ್ಟಿಕೊಂಡು ಜಾಗ ಖಾಲಿ ಮಾಡುತ್ತಿದ್ದಾರೆ.

ಇನ್ನು ಕೊನೇ ಹಂತದ ಕಸರತ್ತು ಎಂಬಂತೆ ಮನೆಮನೆಗೆ ತೆರಳಿ ಮತಯಾಚನೆ ಮಾಡುವತ್ತ ಎಲ್ಲ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಗಮನ ಹರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net