ಮುಖ್ಯರಸ್ತೆಯಲ್ಲಿ ಸಂಚರಿಸಿದ ಕಾಡಾನೆ

ಚಿತ್ರ 14ಎಸ್ ಡಿ ಪಿ 01..
ಮುಖ್ಯ ರಸ್ತೆಯಲ್ಲಿ ಸಂಚರಿಸಿದ ಕಾಡಾನೆ
Published on

ಸಿದ್ದಾಪುರ : ಚೆನ್ನಯ್ಯನ ಕೋಟೆ ಹಾಗೂ ಪಾಲಿಬೆಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯೆ ಶುಕ್ರವಾರ ಬೆಳಗ್ಗೆ ಕಾಡಾನೆಯೊಂದು ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ವಾಹನ ಸವಾರರಲ್ಲಿ ಆತಂಕ ನಿರ್ಮಾಣವಾಗಿತ್ತು.

ಈ ಮಾರ್ಗವು ಸಿದ್ದಾಪುರ, ಗೋಣಿಕೊಪ್ಪ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿದ್ದು, ಈ ಕಾಡಾನೆ ರಸ್ತೆಯಲ್ಲಿ 1 ಕಿ.ಮೀ.ದೂರ ಸಂಚರಿಸುವ ಮೂಲಕ ಈ ಭಾಗದ ಜನರಲ್ಲಿ ಆತಂಕ ಹುಟ್ಟು ಹಾಕಿತ್ತು. ಕಾಡಾನೆ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದು ಈ ರಸ್ತೆಯಲ್ಲಿ ಹಲವಾರು ವಾಹನಗಳು ತೆರಳುವ ರಸ್ತೆಯಾಗಿದೆ. ಅರಣ್ಯ ಇಲಾಖೆ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net