ಟ್ರಾೃಕ್ಟರ್ ಹರಿದು ಮಹಿಳೆ ಸಾವು

Published on

ಮದ್ದೂರು: ತಾಲೂಕಿನ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಬೈಕ್‌ನಿಂದ ಆಯತಪ್ಪಿ ಬಿದ್ದ ಮಹಿಳೆ ಮೇಲೆ ಟ್ರಾೃಕ್ಟರ್ ಹರಿದು ಮಹಿಳೆ ಮೃತಪಟ್ಟಿದ್ದಾರೆ.

ನಾಗಮಂಗಲ ತಾಲೂಕಿನ ಬಿಂಡೇನಹಳ್ಳಿ ಗ್ರಾಮದ ಮಹೇಶ್ ಅವರ ಪತ್ನಿ ಶ್ವೇತಾರಾಣಿ (35)ಮೃತರು. ಕೊಪ್ಪ ಸಮೀಪದ ಮಾರಂಗೆರೆ ಗ್ರಾಮಕ್ಕೆ ಸಂಬಂಧಿಕರ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶ್ವೇತಾ ಅವರು, ಪೂಜಾ ಸಾಮಗ್ರಿ ಕೊಳ್ಳಲು ತಮ್ಮ ಸಂಬಂಧಿಕರ ಯುವಕನೊಬ್ಬನ ಜತೆ ಬೈಕ್‌ನಲ್ಲಿ ಕೊಪ್ಪ ಗ್ರಾಮಕ್ಕೆ ಆಗಮಿಸುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಿದ್ದ ಟ್ರಾೃಕ್ಟರ್ ಮಹಿಳೆ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net