ಭೀಕರ ಅಪಘಾತ; ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು

Sulochana
Published on

ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಬೈಕ್ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸುಲೋಚನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಿನ್ನೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ನೈಸ್ ರಸ್ತೆಯಲ್ಲಿ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ವೇಳೆ ಬೈಕ್​ನಲ್ಲಿದ್ದ ಇಬ್ಬರಿಗೂ ಗಾಯವಾಗಿತ್ತು. ಯುವಕ ಆನಂದ ಫುಲ್ ಹೆಲ್ಮೆಟ್ ಹಾಕಿದ್ದರೆ, ಯುವತಿ ಸುಲೋಚನಾ ಹಾಫ್ ಹೆಲ್ಮೆಟ್ ಧರಿಸಿದ್ದರು. ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸುತ್ತಿದ್ದಂತೆ, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಯುವತಿ ಸುಲೋಚನಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಯುವಕನ ಸ್ಥಿತಿಯೂ ಸದ್ಯ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಈ ಬಗ್ಗೆ ಕೆಂಗೇರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: VIDEO | ಪಿಸ್ತೂಲ್ ಬಳಸಿ ಕೇಕ್ ಕಟ್ ಮಾಡಿದ ಯುವಕ ಪೊಲೀಸರಿಂದ ಬಂಧನದ ಗಿಫ್ಟ್!

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ! 

ಅಪಘಾತ ಸಂಭವಿಸುತ್ತಿದ್ದಂತೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದೆವು. ಈ ವೇಳೆ ಏನೂ ಆಗುವುದಿಲ್ಲ. ಚೇತರಿಸಿಕೊಳ್ಳುತ್ತಾರೆ ಎಂದು ಹೇಳಿದ್ದರು. ಆದರೆ ಬೆಳಗ್ಗೆ ನಾಲ್ಕು ಗಂಟೆಯ ಸುಮಾರಿಗೆ ಸುಲೋಚನಾ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಬೇರೆ ಆಸ್ಪತ್ರೆ ಆಗಿದ್ದರು ಜೀವ ಉಳಿಯುತ್ತಿತ್ತು. ಕಷ್ಟ ಪಟ್ಟು ಓದಿ, ಮನೆ ಕಟ್ಟುವುದಕ್ಕಾಗಿ ದುಡಿಯುತ್ತಿದ್ದಳು. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೃತ ಯುವತಿಯ ಸಂಬಂಧಿಕ ಭರತ್ ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ‌

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net