ತಡವಾಗಿ ಬಂದಿದ್ದಕ್ಕೆ ಬಾಯಿಗೆ ಬಂದಂತೆ ಬೈದ ಮಹಿಳೆ; ಡೆತ್​ನೋಟ್ ಬರೆದಿಟ್ಟು ಡೆಲಿವೆರಿ ಬಾಯ್​ ಆತ್ಮಹತ್ಯೆಗೆ ಶರಣು!

devb
Published on

ಚೆನ್ನೈ: 19 ವರ್ಷದ ಫುಡ್ ಡೆಲಿವರಿ ಬಾಯ್ ಮಂಗಳವಾರ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಳತ್ತೂರಿನಲ್ಲಿ ನಡೆದಿದೆ. ಈ ತಡವಾಗಿ ಡೆಲವರಿ ಮಾಡಿದಕ್ಕೆ ಮಹಿಳೆಯೊಬ್ಬಳು ನಿಂದಿಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದು ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ.

ಕೊಳತ್ತೂರು ಪೊಲೀಸರ ಪ್ರಕಾರ ಮೃತನನ್ನು ಜೆ ಪವಿತ್ರನ್ ಎಂದು ಗುರುತಿಸಲಾಗಿದ್ದು, ಈತ ಬಿಕಾಂ ವಿದ್ಯಾರ್ಥಿಯಾಗಿದ್ದು, ಸಂಜೆಯ ಹೊತ್ತಿನಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ದಿನಸಿ ಸಾಮಾನುಗಳನ್ನು ತಲುಪಿಸಲು ಹೋದಾಗ ಮಹಿಳೆಯೊಬ್ಬರು ತನ್ನನ್ನು ನಿಂದಿಸಿದ್ದರಿಂದ ಮನನೊಂದ ತಾನು ಈ ಕ್ರಮ ಕೈಗೊಂಡಿರುವುದಾಗಿ ಯುವಕ ಡೆತ್​​ ನೋಟ್​ನಲ್ಲಿ ಬರೆದುಕೊಂಡಿದ್ದಾನೆ.

ಮನೆ ವಿಳಾಸ ಪತ್ತೆಯಾಗದ ಕಾರಣ ದಿನಸಿ ಡೆಲಿವರಿ ತಲುಪಿಸುವುದು ವಿಳಂಬವಾಗಿದೆ. ಇದರಿಂದ ಕೋಪಗೊಂಡ ಮಹಿಳೆ ಡೆಲಿವರಿ ಕಂಪನಿಗೆ ದೂರು ನೀಡಿದ್ದಳು. ಈ ಯುವಕನನ್ನು ಮತ್ತೆ ಡೆಲಿವರಿಗಾಗಿ ಕಳಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕಂಪನಿಯ ಕಡೆಯಿಂದ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಮಗೆ ತಿಳಿದಿಲ್ಲ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2 ದಿನಗಳ ನಂತರ ಶುಕ್ರವಾರ ಕೆಲಸ ಕಳೆದುಕೊಂಡಿದ್ದ ಯುವಕ ಮಹಿಳೆಯ ಮನೆಗೆ ಕಲ್ಲು ಎಸೆದು ಕಿಟಕಿಯ ಗಾಜನ್ನು ಒಡೆದಿದ್ದಾನೆ. ಈ ಹಿನ್ನೆಲೆಯಲ್ಲಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸಿಎಸ್​ಆರ್ ಜಾರಿ ಮಾಡಲಾಗಿತ್ತು, ನಂತರ ಪೋಷಕರಿಗೆ ಕರೆ ಮಾಡಿ ಎಚ್ಚರಿಕೆ ನೀಡಿ ಬಿಡಲಾಗಿತ್ತು. ಇದರಿಂದ ಮನನೊಂದ ಯುವಕ ಮಂಗಳವಾರ ತನ್ನ ನಿವಾಸದಲ್ಲಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net