ಇಂದು ಬೆಳ್ಳಂಬೆಳಗ್ಗೆ ದೆಹಲಿಗೆ ಹೊರಟ ಯೋಗೇಶ್ವರ್! ಸಚಿವ ಸ್ಥಾನ ಸಿಗುತ್ತಾ?

cpy bsy
Published on

ಬೆಂಗಳೂರು: ಇಂದು ಬೆಳಗ್ಗೆ ಸಿ.ಪಿ.ಯೋಗೇಶ್ವರ್ ಬೆಂಗಳೂರಿನಿಂದ ದೆಹರಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಂಡಾಯ ಎದ್ದಿದ್ದ ಸಿ.ಪಿ.ಯೋಗೇಶ್ವರ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇದರಿಂದ ಭಾರೀ ಅಸಮಾಧಾನಗೊಂಡಿರುವ ಯೋಗೇಶ್ವರ್​ ಹೈಕಮಾಂಡ್ ಬಳಿ ಮತ್ತೊಮ್ಮೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಇಂದು ಯೋಗೇಶ್ವರ್​ ಯಾರನ್ನು ಭೇಟಿ ಮಾಡುತ್ತಾರೆ ಎಂಬುದಕ್ಕೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಬೇಕು ಅಂದ್ರೆ ನನಗೂ ಸಂಪುಟದಲ್ಲಿ ಸ್ಥಾನಮಾನ ಸಿಗಬೇಕು. ಆಗ ಮಾತ್ರವೇ ನಮ್ಮ ಗುರಿ ಸಾಧಿಸಲು ಸಾಧ್ಯ ಎಂದು ವರಿಷ್ಟರ ಮನವೊಲಿಸಲು ಯೋಗೇಶ್ವರ್​ ಕಸರತ್ತು ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net