

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಮತ ಏಣಿಕೆ ನಡೆಯುತ್ತಿದ್ದು, ಪಕ್ಷದ ಅಬ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಹೀಗಿರುವಾಗ ಇಲ್ಲೊಬ್ಬ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಕೌಂ ಟಿಂಗ್ ಸೆಂಟರ್ಗೆ ಬಂದು ಸಿಕ್ಕಿ ಬಿದ್ದಿದ್ದಾನೆ.
ಕಾಲಿಗೆ ಮೊಬೈಲ್ ಕಟ್ಟಿಕೊಂಡು ಲುಂಗಿ ತೊಟ್ಟು, ಕೇಸರಿ ಶಾಲು ಹಾಕಿಕೊಂಡು ತಾನು ಏಜೆಂಟ್ ಅಂತ ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಯುವಕನನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್ಗಳು ಮತಕೇಂದ್ರಗಳತ್ತ ಬಂದಿದ್ದರು. ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಏಜೆಂಟ್ ಎಂದು ಯುವಕನೊಬ್ಬ ಮತಕೇಂದ್ರಕ್ಕೆ ಬಂದಿದ್ದ. ಯುವಕನೊಬ್ಬ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಲುಂಗಿ ತೊಟ್ಟು ಮತ ಎಣಿಕಾ ಕೇಂದ್ರಕ್ಕೆ ಬಂದಿದ್ದಾನೆ. ಜೊತೆಗೆ ಈತ ಕೇಸರಿ ಶಾಲು ಹಾಕಿದ್ದ. ತಪಾಸಣೆ ನಡೆಸಿದ್ದ ಪೊಲೀಸರಿಗೆ ಆತನ ಬಳಿಯಲ್ಲಿ ಮೊಬೈಲ್ ಇರುವುದು ತಿಳಿದು ಮತ ಎಣಿಕಾ ಕೇಂದ್ರದ ದ್ವಾರದಲ್ಲೇ ಏಜೆಂಟ್ನನ್ನು ಪೊಲೀಸರು ತಡೆಹಿಡಿದು ವಾಪಸ್ ಕಳಿಸಿದ್ದಾರೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಇದೀಗ ಕಾಂಗ್ರೆಸ್ ಪಕ್ಷ 117 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಫಲಿತಾಂಶ ಹೀಗೆ ಮುಂದುವರಿದರೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.