

ಮೈಸೂರು: ನಗರದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಾಮರಾಜ ಮೊಹಲ್ಲಾದ ನಿವಾಸಿ ಸಂಜಯ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನಗರದ ಯಾದವಗಿರಿಯ ರೈಲು ಹಳಿ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಶ್ಯಾವಾಟಿಕೆ ಮೇಲೆ ದಾಳಿ: ನಗರದ ಲಾಡ್ಜ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿ ಅಡ್ಡೆಯ ಮೇಲೆ ಭಾನುವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ವಿಜಯ ನಗರ ವಾಟರ್ ಟ್ಯಾಂಕ್ ಬಳಿ ಇರುವ ಲಾಡ್ಜ್‌ನಲ್ಲಿ ವೇಶ್ಯಾವಾಟಿ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಯಿತು. ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.