

ಮೈಸೂರು: ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಎದುರು ರಸ್ತೆ ದಾಟುತ್ತಿದ್ದ ಯುವಕನಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಮೃತ. ಬಸ್ ವೇಗವಾಗಿ ಬರುತ್ತಿತ್ತು. ಆದರೆ ವೇಗ ಅರಿಯದೆ ಮುಭಾರಕ್ ರಸ್ತೆ ದಾಟಲು ಯತ್ನಿಸಿದ್ದಾನೆ. ಚಾಲಕ ಬಸ್ ನಿಲ್ಲಿಸಲು ಬ್ರೇಕ್ ಹಾಕಿದರೂ ಸಾದ್ಯವಾಗಿಲ್ಲ. ಆಗ ಬಸ್ ನಡಿ ಸಿಲುಕಿ ಪ್ರಾಣ ಬಿಟ್ಟಿದ್ದಾನೆ.
ಘಟನೆ ದಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ನಂಜನಗೂಡು ಸಂಚಾರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.