ನ್ಯಾಯಕ್ಕಾಗಿ ಆಗ್ರಹಿಸಿ ಗೃಹ ಸಚಿವರಿಗೆ ಪತ್ರ ಬರೆದ ಯುವತಿ ಸಹೋದರಿ

Crime Logo
Published on

ಬೆಂಗಳೂರು: ವ್ಯಕ್ತಿಯೊಬ್ಬ ವಿವಾಹವಾಗುವುದಾಗಿ ವಂಚಿಸಿದ ಪರಿಣಾಮ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಯುವತಿಯ ಸಹೋದರಿ ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯ ಗೃಹ ಸಚಿವರು, ರಾಷ್ಟ್ರೀಯ ಮಹಿಳಾ ಆಯೋಗ, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪುಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಸ್ಕಾನ್ ಖಾನೂಮ್(೨೭) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಅಬ್ರಾರ್ ಶೇಕ್ ಎಂಬಾತನ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.


ಮುಸ್ಕಾನ್‌ನನ್ನು ಪರಿಚಯಿಸಿಕೊಂಡಿದ್ದ ಅಬ್ರಾರ್ ಶೇಕ್ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ಸಂಪರ್ಕದಲ್ಲಿದ್ದ. ಇತ್ತೀಚೆಗೆ ಅವಳನ್ನು ನಿರ್ಲಕ್ಷಿಸಿದ್ದ. ಇದರಿಂದ ಮನನೊಂದು ಮುಸ್ಕಾನ್ ಖಾನಮ್ ಸೆ. ೧೧ ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ಸಹೋದರಿ ಈ ಬಗ್ಗೆ ರಾಜ್ಯ ಗೃಹ ಸಚಿವರು, ರಾಷ್ಟ್ರೀಯ ಮಹಿಳಾ ಆಯೋಗ, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಆದರೆ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ವೀಡಿಯೋ ಲೀಕ್ ಮಾಡುವುದಾಗಿ ಬೆದರಿಕೆ:
ನನ್ನ ಸಹೋದರಿ ಮುಸ್ಕಾನ್ ಖಾನಮ್‌ಗೆ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದ. ಮತ್ತು ಆಕೆಯ ಜತೆ ವರ್ಷಗಳ ಕಾಲ ಸಂಬಂಧದಲ್ಲಿದ್ದು. ಇತ್ತೀಚೆಗೆ ಅವಳನ್ನು ನಿರ್ಲಕ್ಷಿಸಿದ್ದಾನೆ. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡದಂತೆ ಅಬ್ರಾರ್ ಶೇಕ್ ಬೆದರಿಕೆ ಹಾಕಿದ್ದಾರೆ ಎಂದು ಸಿಮ್ರಾನ್ ಬಾನು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಇತ ನನ್ನ ಸಹೋದರಿಯ ಖಾಸಗಿ ವೀಡಿಯೋಗಳನ್ನು ಆನ್‌ಲೈನ್‌ನಲ್ಲಿ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.


ನನ್ನ ಸಹೋದರಿಯ ಆತ್ಮಹತ್ಯೆಗೆ ಶರಣಾದ ನಂತರ ಆತನ ಜತೆಗೆ ಮಾಡಿದ ಮೇಸೆಜ್ ಹೊಂದಿದ್ದ ಫೋನ್ ಅನ್ನು ಕಳ್ಳತನ ಮಾಡಿದ್ದಾನೆ. ಆತ ಪ್ರಭಾವಿಯಾಗಿರುವ ಕಾರಣ ರಾಜಕಾರಣಿಗಳು ಮತ್ತು ರೌಡಿಗಳೊಂದಿಗೆ ನಿಕಟ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡು ನನಗೆ ಮತ್ತು ನನ್ನ ಪತಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಿಮ್ರಾನ್ ಬಾನು ದೂರಿನಲ್ಲಿ ಆರೋಪಿಸಿದ್ದಾರೆ. ಇನ್ನು ಇತ ಹಲವಾರು ಯುವತಿಯರಿಗೆ ಮದುವೆ ಆಗುವುದಾಗಿ ಸುಳ್ಳು ಭರವಸೆ ನೀಡಿ, ಅವರೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿದ್ದು, ನನ್ನ ತಂಗಿಯ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net