

ನವದೆಹಲಿ: ಫೆಬ್ರವರಿ 8ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ಧತೆಯಲ್ಲಿ ತೊಡಗಿದ್ದು ಇಂದು 70 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈಗಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರದಿಂದ ಹಾಗೂ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಪಟ್ಪರ್ಗಂಜ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಂದು ಚುನಾವಣೆಗೆ ಸಂಬಂಧಪಟ್ಟ ಸಭೆ ನಡೆದಿತ್ತು. ದೆಹಲಿಯ ಆಪ್ ಮುಖಂಡರು ಅದರಲ್ಲಿ ಪಾಲ್ಗೊಂಡಿದ್ದರು. ಬಳಿಕ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ಈ 70 ಜನರ ಪಟ್ಟಿಯಲ್ಲಿ 23 ಜನರು ಹೊಸಬರಾಗಿದ್ದಾರೆ.
ಚಾಂದನಿಚೌಕ್ದಿಂದ ಪರ್ಲಾದ್ ಸಿಂಗ್, ದ್ವಾರಕಾದಲ್ಲಿ ವಿನಯ್ ಕುಮಾರ್ ಮಿಶ್ರಾ ಹಾಗೂ ಗಾಂಧಿ ನಗರದಿಂದ ದೀಪು ಚೌಧರಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೊಂಡ್ಲಿ ಕ್ಷೇತ್ರದಲ್ಲಿ ಈ ಹಿಂದಿನ ಚುನಾವಣೆಯಲ್ಲಿ ಮನೋಜ್ ಕುಮಾರ್ ಸ್ಪರ್ಧಿಸಿದ್ದರು. ಆದರೆ ಈ ಬಾರಿ ವಕ್ತಾರ ಕುಲ್ದೀಪ್ ಕುಮಾರ್ಗೆ ಟಿಕೆಟ್ ನೀಡಲಾಗಿದೆ. (ಏಜೆನ್ಸೀಸ್)