ಆಪ್​ನ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಪೃಥ್ವಿ ರೆಡ್ಡಿ

aap
Published on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದು ಈ ಬಗ್ಗೆ ಪೃಥ್ವೀ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಸಂದರ್ಭ ಅವರು ಒಟ್ಟು 80 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.

ಈ ಸಂದರ್ಭ ಮಾತನಾಡಿದ ಅವರು 'ಎಎಪಿಯು ಭ್ರಷ್ಟಾಚಾರ-ವಿರೋಧಿ ಆಂದೋಲನದ ಮೂಲಕ ಹುಟ್ಟಿಕೊಂಡ ಪಕ್ಷವಾಗಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ ಹಾಗೂ ಭಾರತವು ವಿಶ್ವದ ನಂಬರ್‌ ಒನ್‌ ಸ್ಥಾನ ಅಲಂಕರಿಸುವುದಕ್ಕೆ ಭ್ರಷ್ಟಾಚಾರ ಅಡ್ಡಿಯಾಗಿದೆ. ಭಾರತವನ್ನು ಶೇ. 100ರಷ್ಟು ಭ್ರಷ್ಟಾಚಾರ ಮುಕ್ತ ಮಾಡಬೇಕೆಂದರೆ ಶೇ. 100ರಷ್ಟು ಪ್ರಮಾಣಿಕರಾಗಿರುವವರು ನಮ್ಮನ್ನು ಪ್ರತಿನಿಧಿಸಬೇಕು' ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net