ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಪ್ರಮಾಣ | Atishi Swearing-in Ceremony

AAP's Atishi Marlena takes oath
Published on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ (Delhi) ನೂತನ ಮುಖ್ಯಮಂತ್ರಿಯಾಗಿ ಆಗಿ ಆಮ್ ಆದ್ಮಿ ಪಕ್ಷದ (AAP) ನಾಯಕಿ ಅತಿಶಿ ಸಿಂಗ್ ಮರ್ಲೆನಾ (Atishi Singh Marlena) ಇಂದು ಪ್ರಮಾಣವಚನ (Swearing-in Ceremony) ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಸಮಾರಂಬದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು. ಸಿಎಂ ಅತಿಶಿ ಅವರೊಂದಿಗೆ ಆಮ್ ಆದ್ಮಿ ಪಕ್ಷದ ಸೌರಭ್ ಭಾರಧ್ವಜ್ , ಗೋಪಾಲ್ ರಾಯ್, ಇಮ್ರಾನ್ ಹುಸ್ಸೇನ್, ಕೈಲಾಶ್ ಗೆಹ್ಲೋತ್ ಮತ್ತು ಮುಖೇಶ್ ಅಹ್ಲಾವತ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೈಲಾ ದೀಕ್ಷಿತ್ ಬಳಿಕ ಎಎಪಿಯ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿ ಹಾಗೂ ದೆಹಲಿಯ ಅತಿ ಕಿರಿಯ ಮುಖ್ಯಮಂತ್ರಿಯಾಗಿ ಹುದ್ದೆ ಅಲಂಕರಿಸಿದ್ದಾರೆ. 2020ರಲ್ಲಿ ಅತಿಶಿ ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಕಲ್ಕಾಜಿಯಿಂದ ಗೆದ್ದಿದ್ದರು.

ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಎಎಪಿ ರಾಷ್ಟ್ರಾಧ್ಯಕ್ಷ ಅರವಿಂದ್ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಅವರ ಹೆಸರನ್ನು ಘೋಷಿಸಲಾಗಿತ್ತು. ಈ ನಿರ್ಧಾರವನ್ನು ಪಕ್ಷದ ಸರ್ವಾನುಮತದಿಂದ ಅಂಗೀಕರಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net