ಕಾಲೇಜಿಗೆ ಹೋಗುತ್ತಿದ್ದ ಬಾಲಕನನ್ನು ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳು...ಸ್ವಲ್ಪ ದೂರ ಹೋಗುತ್ತಿದ್ದಂತೆ ಆತನ ಮರ್ಮಾಂಗವನ್ನೇ ಕತ್ತರಿಸಿದರು..

Boy 15 Feb 20
Published on

ಮಂಡ್ಯ: ಕಾಲೇಜಿಗೆ ಹೋಗಲು ಬಸ್​ಗಾಗಿ ಕಾಯುತ್ತಿದ್ದ ಅಪ್ರಾಪ್ತನನ್ನು ಅಪಹರಿಸಿದ ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಬಸ್​ಸ್ಟ್ಯಾಂಡ್​ನಲ್ಲಿ ಒಬ್ಬನೇ ಬಸ್​ಗೆ ಕಾಯುತ್ತಿದ್ದ. ಆತನನ್ನು ಡ್ರಾಪ್​ ಕೊಡುತ್ತೇವೆ ಎಂದು ಕರೆದುಕೊಂಡು ಹೋದ ದುಷ್ಕರ್ಮಿಗಳು ಬಾಲಕನ ಮರ್ಮಾಂಗವನ್ನು ಕತ್ತರಿಸಿದ್ದಾರೆ.

ಕಾರಿನಲ್ಲಿ ಮೂರ್ನಾಲ್ಕು ಕಿಲೋಮೀಟರ್​ ಕರೆದೊಯ್ದ ದುಷ್ಕರ್ಮಿಗಳು ಬಾಲಕನ ಮರ್ಮಾಂಗ ಕತ್ತರಿಸಿ ಆತನನ್ನು ರಸ್ತೆ ಬದಿಯಲ್ಲಿ ಬಿಸಾಡಿ ಪರಾರಿಯಾಗಿದ್ದಾರೆ.

ನರಳುತ್ತಿದ್ದ ಬಾಲಕನ ನೆರವಿಗೆ ಧಾವಿಸಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಘಟನೆ ಈ ಬಗ್ಗೆ ಆತನ ಪಾಲಕರಿಗೆ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net