

ಬೆಂಗಳೂರು: ಅಭಿಷೇಕ್ ಅಂಬರೀಷ್, ಅವಿವಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಕರ್ಕಾಟಕ ಶುಭ ಲಗ್ನದ ಶುಭ ಮುಹೂರ್ತದಲ್ಲಿ ಮದುವೆ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಅಂಬರೀಷ್ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ.ಗೌಡ ಸಂಪ್ರದಾಯಂತೆ ಈ ಜೋಡಿ ಮದುವೆಯಾಗಿದೆ.
ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ 9:30-10:30 ಮೂರ್ಹತದಲ್ಲಿ ಅಭಿಷೇಕ್ , ಅವಿವಾಗೆ ಮಾಂಗಲ್ಯ ಧಾರಣೆ ಮಾಡಿದ್ರು. ಇಬ್ಬರು ಒಟ್ಟಿಗೆ ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.